ಭಾನುವಾರ, ಸೆಪ್ಟೆಂಬರ್ 26, 2021
28 °C

ಜಮ್ಮುನಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು (ಪಿಟಿಐ): ಭದ್ರತಾ ಪಡೆಗಳ ಸಿಬ್ಬಂದಿ ಶುಕ್ರವಾರ ರಾಜೌರಿ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜಿಲ್ಲೆಯ ತಾಣಮಂಡಿ ಅರಣ್ಯ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ.

‘ಒಟ್ಟು ನಾಲ್ವರು ಉಗ್ರರಿದ್ದರು. ಇವರಲ್ಲಿ ಇಬ್ಬರು ವಿದೇಶಿಗರು. ಬಹುಶಃ ಅವರು ಕಾಶ್ಮೀರ ಭಾಗದಿಂದ ಇತ್ತ ಕಡೆ ಸುಳಿದಿರಬೇಕು’ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುಖೇಶ್‌ ಸಿಂಗ್ ಅವರು ತಿಳಿಸಿದರು.

ಭದ್ರತಾ ಪಡೆಗಳು ಉಗ್ರರ ನೆಲೆ ಕುರಿತಂತೆ ಕಳೆದ ಒಂದು ತಿಂಗಳಿಂದ ಹುಡುಕಾಟ ನಡೆಸಿತ್ತು. ಇಂದು ಅವರ ನೆಲೆ ಪತ್ತೆಯಾಗಿದ್ದು, ಗುಂಡಿನ ಚಕಮಕಿ ನಡೆಯಿತು ಎಂದು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು