ಬುಧವಾರ, ಆಗಸ್ಟ್ 4, 2021
21 °C

ಗುಂಡಿನ ಚಕಮಕಿ: ಇಬ್ಬರು ಪಾಕ್‌ ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಜಮ್ಮು–ಕಾಶ್ಮೀರದ ರಜೌರಿ ಜಿಲ್ಲೆಯ ದಾದಲ್ ಹಾಗೂ ಸುಂದರ್‌ಬನಿ ಸೆಕ್ಟರ್‌ನಲ್ಲಿ ಗುರುವಾರ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆಗಳು ಇಬ್ಬರು ಪಾಕಿಸ್ತಾನದ ಉಗ್ರರನ್ನು ಹೊಡೆದುರಳಿಸಿವೆ.

ಈ ಗುಂಡಿನ ಚಕಮಕಿಯಲ್ಲಿ ಶ್ರೀಜಿತ್‌ ಎಂ. ಹಾಗೂ ಮರುಪ್ರೋಲು ಜಶ್ವಂತ್‌ ರೆಡ್ಡಿ ಎಂಬ ಯೋಧರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರರೊಬ್ಬರು ತಿಳಿಸಿದ್ದಾರೆ.

‍ಪಾಕಿಸ್ತಾನದ ಉಗ್ರರು ಗಡಿಯೊಳಗೆ ನುಸುಳುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ, ಭದ್ರತಾ ಪಡೆಗಳು ಶೋಧ ಕಾರ್ಯ ಕೈಗೊಂಡವು. ಈ ವೇಳೆ, ಉಗ್ರರು ಯೋಧರ ಮೇಲೆ ಗುಂಡಿನ ಮಳೆಗೆರೆದರಲ್ಲದೇ, ಗ್ರೆನೇಡ್‌ಗಳನ್ನು ಎಸೆದರು. ಭದ್ರತಾ ಪಡೆಗಳು ಸಹ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದವು ಎಂದು ಅವರು ತಿಳಿಸಿದ್ದಾರೆ.

ಹತ ಉಗ್ರರ ಬಳಿ ಇದ್ದ ಎಕೆ–47 ರೈಫಲ್‌ಗಳು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು