ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಅಲ್ –ಕೈದಾ ಸಂಘಟನೆಯೊಂದಿಗೆ ಸಂಪರ್ಕ, ಇಬ್ಬರು ಶಂಕಿತ ಉಗ್ರರ ಬಂಧನ

Last Updated 21 ಆಗಸ್ಟ್ 2022, 7:52 IST
ಅಕ್ಷರ ಗಾತ್ರ

ಗುವಾಹಟಿ/ಗೋಲ್‌ಪಾರಾ: ನಿಷೇಧಿತ ಉಗ್ರ ಸಂಘಟನೆ ಭಾರತ ಉಪಖಂಡದ ಅಲ್–ಕೈದಾ (ಎಕ್ಯೂಐಎಸ್) ಮತ್ತು ಅನ್ಸರುಲ್ಲಾ ಬಾಂಗ್ಲಾ ಟೀಮ್ (ಎಬಿಟಿ) ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೊರ್ನೋಯಿ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಕುನಿಯಾ ಶಾಂತಿಪುರದ ನಿವಾಸಿ ಇಮಾಮ್ ಅಬ್ದುಸ್ ಸುಭಾನ್ ಮತ್ತು ಗೋಲ್‌ಪಾರಾದ ಮಟಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ತಿಲಪಾರಾ ನಾತುನ್ ನಿವಾಸಿ ಇಮಾಮ್ ಜಲಾಲುದ್ದೀನ್ ಶೇಖ್ ಎಂದು ಗುರುತಿಸಲಾಗಿದೆ.

ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೋಲ್‌ಪಾರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ರೆಡ್ಡಿ ತಿಳಿಸಿದ್ದಾರೆ.

‘ಆರೋಪಿಗಳ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಅಲ್-ಕೈದಾ ಸಂಘಟನೆಯೊಂದಿಗೆ ವ್ಯವಹರಿಸಲು ಬಳಸುತ್ತಿದ್ದ ವಸ್ತುಗಳು, ಪೋಸ್ಟರ್‌ಗಳು, ಪುಸ್ತಕಗಳು ಮತ್ತು ಇತರ ದಾಖಲೆಗಳು ಸೇರಿದಂತೆ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಐಡಿ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ರಾಕೇಶ್ ರೆಡ್ಡಿ ಹೇಳಿದ್ದಾರೆ.

ಬಂಧಿತ ಆರೋಪಿಗಳು ಬಾಂಗ್ಲಾ ಪ್ರಜೆಗಳಿಗೆ ಆಶ್ರಯ ನೀಡಿದ್ದರು. ಜತೆಗೆ ಬಾಂಗ್ಲಾದಿಂದ ಅಸ್ಸಾಂಗೆ ಬಂದ ಜಿಹಾದಿ ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಜುಲೈ 28ರಂದು ವಿವಿಧ ಜಾಗತಿಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ 11 ಮಂದಿಯನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT