ಮಂಗಳವಾರ, ಮಾರ್ಚ್ 28, 2023
31 °C

‌ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಶ್ರೀನಗರ: ನಗರದ ಹೊರವಲಯದ ರಂಗ್ರೆತ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಶೋಧಕಾರ್ಯ ನಡೆಯಿತು. ಕಾರ್ಯಾಚರಣೆ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದರು. ಇದಕ್ಕೆ ಭದ್ರತಾ ಪಡೆಗಳಿಂದ ಪ್ರತಿದಾಳಿ ನಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರನನ್ನು ಕೊಂದ ಒಂದು ದಿನದ ನಂತರ ಈ ಕಾರ್ಯಾಚರಣೆ ನಡೆದಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು