ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡಿಸಲಿನಲ್ಲಿ ಬೆಂಕಿ: 2 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು

Last Updated 12 ಮಾರ್ಚ್ 2023, 10:12 IST
ಅಕ್ಷರ ಗಾತ್ರ

ಕಾನ್ಪುರ (ಉತ್ತರ ಪ್ರದೇಶ): ಭಾನುವಾರ ಮುಂಜಾನೆ ಇಲ್ಲಿನ ಹರಾಮೌ ಗ್ರಾಮದ ಗುಡಿಸಲೊಂದು ಬೆಂಕಿಗಾಹುತಿಯಾಗಿದ್ದು, ದಂಪತಿ ಮತ್ತು ಅವರ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಜನ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ ಮಹಿಳೆಗೂ ಗಂಭೀರ ಸುಟ್ಟ ಗಾಯಗಳಾಗಿವೆ.

ಕುಟುಂಬದವರು ಮಲಗಿದ್ದಾಗ ವಿದ್ಯುತ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಮೃತರನ್ನು ಕೂಲಿ ಕಾರ್ಮಿಕ ಸತೀಶ್ (27), ಅವರ ಪತ್ನಿ ಕಾಜಲ್ (24), ಅವರ ಮಕ್ಕಳಾದ ಸನ್ನಿ (7), ಸಂದೀಪ್ (4) ಮತ್ತು ಮಗಳು ಗುಡಿಯಾ (2) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಕಾನ್ಪುರ್ ದೇಹತ್) ಬಿಬಿಜಿಟಿಎಸ್ ಮೂರ್ತಿ ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT