ಸೋಮವಾರ, ಜೂನ್ 27, 2022
21 °C

ಕೋಲ್ಕತ್ತ: ಸಿಡಿಲಿಗೆ 20 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ದಕ್ಷಿಣ ಬಂಗಾಳದ ಮೂರು ಜಿಲ್ಲೆಗಳಲ್ಲಿ ಸೋಮವಾರ ಸಂಭವಿಸಿದ ಸಿಡಿಲಿನ ಅಬ್ಬರಕ್ಕೆ ಸುಮಾರು 20 ಜನರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಮುರ್ಷಿದಾಬಾದ್‌ನಲ್ಲಿ ಮತ್ತು ಹೂಗ್ಲಿಯಲ್ಲಿ ತಲಾ ಒಂಬತ್ತು ಮಂದಿ ಸಾವನ್ನಪ್ಪಿದರೆ, ಪುರ್ಬಾ ಮೆದಿನಿಪುರ ಜಿಲ್ಲೆಯಲ್ಲಿ ಇಬ್ಬರು ಸಿಡಿಲು ಬಡಿದು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸಂಭವಿಸಿದ ಸಿಡಿಲಿನ ಅಬ್ಬರಕ್ಕೆ ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ಜಂಗೀಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಕೋಲ್ಕತ್ತ ಸೇರಿದಂತೆ ದಕ್ಷಿಣ ಬಂಗಾಳದ ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಗುಡುಗು ಸಹಿತ ಭಾರಿ ಮಳೆಯಾಗಿದೆ. ಇದು ಮಳೆಗಾಲ ಪೂರ್ವದ ಮಳೆ ಎಂದು ಹವಾಮಾನ ಇಲಾಖೆ ಕಚೇರಿ ತಿಳಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು