ನವದೆಹಲಿ: ದೇಶದಲ್ಲಿ ಹೊಸದಾಗಿ 20 ಮಂದಿಯಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಇದರೊಂದಿಗೆ ರೂಪಾಂತರ ಕೊರೊನಾ ವೈರಸ್ ತಗುಲಿರುವವರ ಒಟ್ಟು ಸಂಖ್ಯೆ 58ಕ್ಕೆ ಏರಿಕೆಯಾಗಿದೆ.

ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕಣ್ಗಾವಲು ಮತ್ತು ನಿಯಂತ್ರಣ ಕ್ರಮಗಳನ್ನು ಚುರುಕುಗೊಳಿಸುವಂತೆ ಕೇಂದ್ರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಇದನ್ನೂ ಓದಿ:ಕೋಲ್ಕತ್ತ: ಚಿತ್ರೀಕರಣಕ್ಕೆ ಇಂಗ್ಲೆಂಡ್ನಿಂದ ಆಗಮಿಸಿದ್ದ ನಟಿಗೆ ಕೋವಿಡ್-19 ದೃಢ

ನವದೆಹಲಿಯ ಐಜಿಐಬಿಯಲ್ಲಿ 11, ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ 10, ನವದೆಹಲಿಯ ಎನ್‌ಸಿಡಿಸಿಯಲ್ಲಿ 8, ಎನ್‌ಐವಿ–ಪುಣೆಯಲ್ಲಿ 25, ಕೋಲ್ಕತ್ತದ ಎನ್‌ಐಬಿಎಂಜಿಯಲ್ಲಿ 1 ಹಾಗೂ ಹೈದರಾಬಾದ್‌ನ ಸಿಸಿಎಂಬಿಯಲ್ಲಿ 3 ಮಾದರಿಗಳಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ.

ಮಂಗಳವಾರ ಹೊಸದಾಗಿ ಪತ್ತೆಯಾಗಿರುವ 20 ಪ್ರಕರಣಗಳು ಪುಣೆಯ ಎನ್‌ಐವಿಯಿಂದ ವರದಿಯಾಗಿವೆ.

ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ. ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ:ಭಾರತದ ನಾಯಕತ್ವ, ಲಸಿಕೆ ಉತ್ಪಾದನಾ ಸಾಮರ್ಥ್ಯ ಪ್ರಶಂಸಿಸಿದ ಬಿಲ್ ಗೇಟ್ಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.