ಮೊಬೈಲ್ ಫೋನ್‌ನಲ್ಲೇ ತ್ರಿವಳಿ ತಲಾಖ್: 20 ವರ್ಷದ ಮಹಿಳೆ ದೂರು

ಬಾರಾಬಂಕಿ, ಉತ್ತರ ಪ್ರದೇಶ: ‘ವಿದೇಶದಲ್ಲಿ ಇದ್ದುಕೊಂಡೇ ಪತಿ ಮೊಬೈಲ್ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ. ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು’ ಎಂದು 20 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಿಳೆಯು ಈ ಸಂಬಂಧ ಶನಿವಾರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ಅವರಿಗೆ ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಲು ಕೆಳಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೂರಿನ ಪ್ರಕಾರ, ಮಹಿಳೆ ಮೂರು ವರ್ಷದ ಹಿಂದೆ, ಖುಷಿನಗರ್ ನಿವಾಸಿ 28 ವರ್ಷದ ವ್ಯಕ್ತಿ ಜೊತೆ ಮದುವೆಯಾಗಿದ್ದು, ದಂಪತಿಗೆ ಗಂಡು ಮಗುವಿದೆ. ಪತಿ ಸದ್ಯ ಸೌದಿ ಅರೇಬಿಯದಲ್ಲಿ ಕೆಲಸ ಮಾಡುತ್ತಿದ್ದಾರೆ.
ಪತಿಯ ಸಹೋದರಿಯರು ಆಗಾಗ್ಗೆ ಹೆಚ್ಚಿನ ವರದಕ್ಷಿಣೆಗೆ ಪೀಡಿಸುತ್ತಿದ್ದರು. ಪತಿಯ ಸಹೋದರನೊಬ್ಬ ಅತ್ಯಚಾರ ಮಾಡಲು ಯತ್ನಿಸಿದ್ದ. ಇಬ್ಬರು ಹೊಡೆದಿದ್ದ ಎಂದು ಮಹಿಳೆಯು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.