ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ

Last Updated 18 ಫೆಬ್ರುವರಿ 2022, 6:47 IST
ಅಕ್ಷರ ಗಾತ್ರ

ಅಹಮದಾಬಾದ್: 2008ರ ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ ಪ್ರಕರಣದ 38 ಮಂದಿ ಅಪರಾಧಿಗಳಿಗೆ ವಿಶೇಷ ನಿಯೋಜಿತ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 11 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ವಿಶೇಷ ನಿಯೋಜಿತ ನ್ಯಾಯಾಧೀಶ ಅಂಬಾಲಾಲ್‌ ಆರ್‌.ಪಟೇಲ್‌ ಅವರು ಫೆಬ್ರುವರಿ 8ರಂದು 49 ಮಂದಿಯನ್ನು ತಪ್ಪಿತಸ್ಥರೆಂದು ಘೋಷಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ 28 ಮಂದಿಯನ್ನು ಖುಲಾಸೆಗೊಳಿಸಿದ್ದರು.

2008ರ ಜುಲೈ 26ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 56 ಜನರು ಮೃತಪಟ್ಟಿದ್ದರು. ಸುಮಾರು 200 ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT