ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ ಚುನಾವಣೆ: 201 ಮತದಾನ ಕೇಂದ್ರಗಳು ಸಂಪೂರ್ಣ ಮಹಿಳೆಯರಿಂದಲೇ ನಿರ್ವಹಣೆ

Last Updated 21 ಮಾರ್ಚ್ 2021, 10:14 IST
ಅಕ್ಷರ ಗಾತ್ರ

ಸಿಲ್ಚಾರ್ (ಅಸ್ಸಾಂ): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂನ ಕ್ಯಾಚರ್ ಜಿಲ್ಲೆಯ 1,834 ರಲ್ಲಿ ದಾಖಲೆಯ 201 ಮತ ಕೇಂದ್ರಗಳಲ್ಲಿ ಮಹಿಳಾ ಅಧಿಕಾರಿಗಳೇ ಸಂಪೂರ್ಣವಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದುಕ್ಯಾಚರ್ ಉಪಆಯುಕ್ತರಾದ ಕೀರ್ತಿ ಜಲ್ಲಿ ತಿಳಿಸಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಚುನಾವಣೆಯಲ್ಲಿ ಭಾಗವಹಿಸಲು ಉತ್ತೇಜಿಸುವ ಸಲುವಾಗಿ ಮಹಿಳಾ ಅಧಿಕಾರಿಗಳೇ ಸಂಪೂರ್ಣವಾಗಿ ನಿರ್ವಹಿಸುವ ಮತ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲಾಡಳಿತ ನಿರ್ಧರಿಸಿದೆ. 2016ರಲ್ಲಿ 10 ಮತದಾನ ಕೇಂದ್ರಗಳಿದ್ದವು. ಈಗ ಅವುಗಳ ಸಂಖ್ಯೆ ದುಪ್ಪಟ್ಟಾಗಿದೆ ಎಂದು ತಿಳಿಸಿದ್ದಾರೆ.

ಕ್ಯಾಚರ್ ಜಿಲ್ಲೆಯ 1,834 ಮತಗಟ್ಟೆಗಳ ಪೈಕಿ ಒಟ್ಟು 201 ಮತಗಟ್ಟೆಗಳಲ್ಲಿ ಸಂಪೂರ್ಣವಾಗಿ ಮಹಿಳಾ ಅಧಿಕಾರಿಗಳೇ ನಿರ್ವಹಿಸಲಿದ್ದಾರೆ ಎಂದು ಜಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 12 ಲಕ್ಷ ಮತದಾರರಿದ್ದು, ಅವರು ಏಪ್ರಿಲ್ 1 ರಂದು ಏಳು ಶಾಸಕರನ್ನು ಆಯ್ಕೆ ಮಾಡಲು ಮತ ಚಲಾಯಿಸಲಿದ್ದಾರೆ.ಕ್ಯಾಚರ್ ಜಿಲ್ಲಾಡಳಿತವು 'ನಾರಿ ಶಕ್ತಿ' ಎಂಬ ವಿಷಯದೊಂದಿಗೆ ವಿಶೇಷ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದೆ, ಇದರಿಂದಾಗಿ ಹೆಚ್ಚೆಚ್ಚು ಮಹಿಳೆಯರು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಮಹಿಳೆಯರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಕೈಗೊಳ್ಳುವಲ್ಲಿ ಜಲ್ಲಿ ಅವರಿಗೆ ಸಹಾಯ ಮಾಡಲು ನಾಲ್ವರು ಹಿರಿಯ ಮಹಿಳಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಅವರಲ್ಲಿ ಮೂವರು ಹೆಚ್ಚುವರಿ ಉಪ ಆಯುಕ್ತರಾಗಿದ್ದು (ಎಡಿಸಿಗಳು), ಮತ್ತೊಬ್ಬರು ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

126 ಸದಸ್ಯರ ಅಸ್ಸಾಂ ವಿಧಾನಸಭೆಗೆ ಮೂರು ಹಂತದ ಚುನಾವಣೆ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT