ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ಅಮಾನ್ಯೀಕರಣ ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ನ.24ಕ್ಕೆ ಮುಂದೂಡಿಕೆ

Last Updated 9 ನವೆಂಬರ್ 2022, 13:55 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2016ರ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ‘ನೋಟು ಅಮಾನ್ಯೀಕರಣ’ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆ ಆಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನವೆಂಬರ್‌ 24ಕ್ಕೆ ಮುಂದೂಡಿದೆ.

ಈ ವಿಷಯದ ಕುರಿತು ಸಮಗ್ರವಾದ ಅಫಿಡವಿಟ್ ಸಲ್ಲಿಸಲು ಒಂದು ವಾರ ಸಮಯಾವಕಾಶ ನೀಡುವಂತೆ ಅಟಾರ್ನಿ ಜನರಲ್‌ ಆರ್‌. ವೆಂಕಟರಮಣಿ ಅವರು ಕೋರ್ಟ್‌ಗೆ ಮನವಿ ಮಾಡಿಕೊಂಡರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠವು ವಿಚಾರಣೆಯನ್ನು ಮುಂದೂಡಿತು.

ಸಮಗ್ರವಾದ ಅಫಿಡವಿಟ್ಟನ್ನು ಸಲ್ಲಿಸಲು ಸಾಧ್ಯವಾಗದ ಕಾರಣವೆಂಕಟರಮಣಿ ಅವರು ಕೋರ್ಟ್‌ಗೆ ಕ್ಷಮೆಯನ್ನೂ ಯಾಚಿಸಿದರು.

ವಿಚಾರಣೆ ಮುಂದೂಡುವಂತೆ ಸಾಂವಿಧಾನಿಕ ಪೀಠಕ್ಕೆ ಮನವಿ ಮಾಡಿರುವುದು ಮುಜುಗರದ ವಿಷಯ ಎಂದು ಪ್ರತ್ಯೇಕ ಅರ್ಜಿದಾರರ ಪರವಾಗಿ ಕೋರ್ಟ್‌ನಲ್ಲಿ ಹಾಜರಿದ್ದ ಹಿರಿಯ ವಕೀಲರಾದ ಶ್ಯಾಮ್‌ ದಿವಾನ್‌ ಮತ್ತು ‍ಪಿ. ಚಿದಂಬರಂ ಅವರು ಕೋರ್ಟ್‌ಗೆ ಹೇಳಿದರು.ಸಾಂವಿಧಾನಿಕ ಪೀಠದ ಸದ್ಯರಾಗಿರುವ ನ್ಯಾಯಮೂರ್ತಿ ನಾಗರತ್ನ ಅವರು ಈ ಹೇಳಿಕೆಯನ್ನು ಅನುಮೋದಿಸಿದರು.

ನೋಟು ಅಮಾನ್ಯೀಕರಣದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ 58 ಅರ್ಜಿಗಳ ವಿಚಾರಣೆಯನ್ನು ಈ ಪೀಠವು ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT