ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2020ರ ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಆದೇಶ ಮುಂದಕ್ಕೆ

Last Updated 21 ಮಾರ್ಚ್ 2022, 10:35 IST
ಅಕ್ಷರ ಗಾತ್ರ

ನವದೆಹಲಿ: 2020ರ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಹಾಗೂ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪನ್ನು ಮಾರ್ಚ್ 23ಕ್ಕೆ ಮುಂದೂಡಿದೆ.

ಈ ಸಂಬಂಧ ಸೋಮವಾರ ಆದೇಶ ನೀಡಬೇಕಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ಈ ಕುರಿತಾದ ಆದೇಶ ಇನ್ನೂ ಸಿದ್ಧವಾಗಿಲ್ಲ. ಹಾಗಾಗಿ ಮಾರ್ಚ್ 23ರ ಬುಧವಾರದಂದು ಆದೇಶ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

2020ರ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ನಾಗರಿಕರ ರಾಷ್ಟ್ರೀಯ ನೋಂದಣಿ(ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯು ಭಾರಿ ಹಿಂಸಾರೂಪಕ್ಕೆ ತಿರುಗಿತ್ತು. ಈ ಗಲಭೆಯಲ್ಲಿ 53 ಮಂದಿ ಬಲಿಯಾಗಿ, 700 ಮಂದಿ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಖಾಲಿದ್ ಸೇರಿದಂತೆ ಮತ್ತಿತರರ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT