ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರ: ಉಮರ್‌ ಖಾಲಿದ್ ಜಾಮೀನು ತಿರಸ್ಕಾರ

Last Updated 24 ಮಾರ್ಚ್ 2022, 11:27 IST
ಅಕ್ಷರ ಗಾತ್ರ

ನವದೆಹಲಿ: ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್‌ ಗುರುವಾರ ತಿರಸ್ಕರಿಸಿದೆ.2020ರಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪಿತೂರಿ ನಡೆಸಿದ, ದೇಶದ್ರೋಹದ ಆರೋಪ ಉಮರ್‌ ಖಾಲಿದ್‌ ಮೇಲಿದೆ.

ಈ ಕುರಿತ ಅರ್ಜಿಯನ್ನು ಮಾರ್ಚ್ 3ರಂದು ವಿಚಾರಣೆ ನಡೆಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ಜಾಮೀನು ಕುರಿತ ಆದೇಶವನ್ನು ಕಾಯ್ದಿರಿಸಿದ್ದರು. ಈ ಆದೇಶವನ್ನು ಗುರುವಾರ ಪ್ರಕಟಿಸಲಾಗಿದೆ.

2020ರಲ್ಲಿ ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ದೆಹಲಿಯಲ್ಲಿ ನಡೆದ ಈ ಗಲಭೆಯಲ್ಲಿ 53 ಮಂದಿ ಬಲಿಯಾಗಿ, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಸಂಬಂಧ ಖಾಲಿದ್ ಮತ್ತಿತ್ತರರ ವಿರುದ್ಧ ಭಯೋತ್ಪಾದನೆ ನಿಗ್ರಹ ಕಾಯ್ದೆ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT