ಜಾಮೀನು ಅರ್ಜಿ ವಿಚಾರಣೆಗೆ ಮೆಹ್ತಾ ಗೈರು: ಸುಪ್ರೀಂ ಕೋರ್ಟ್ ಅಸಮಾಧಾನ

ನವದೆಹಲಿ: 2020ರ ದೆಹಲಿ ಗಲಭೆ ಸಂಬಂಧ ಬಂಧಿಸಲಾಗಿರುವ ವಿದ್ಯಾರ್ಥಿ ಹೋರಾಟಗಾರರ ಜಾಮೀನು ಅರ್ಜಿ ವಿಚಾರಣೆಯ ವೇಳೆ ಸಾಲಿಸಿಟರಲ್ ಜನರಲ್ ತುಷಾರ್ ಮೆಹ್ತಾ ಅವರು ಗೈರಾಗಿದ್ದರು. ಈ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ತುಷಾರ್ ಮೆಹ್ತಾ ಅವರು ವಿಚಾರಣೆಗೆ ಗೈರಾಗಿದ್ದರಿಂದ, ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ದೆಹಲಿ ಪೊಲೀಸರು ಕೋರಿದರು. ಈ ಕುರಿತು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಹಾಗೂ ಎ.ಎಸ್. ಓಕಾ ಅವರಿದ್ದ ಪೀಠವು ಅಸಮಾಧಾನ ವ್ಯಕ್ತಪಡಿಸಿತು.
‘ತುಷಾರ್ ಮಹ್ತ ಅವರು ಇತರೆ ಕೆಲಸಗಳಲ್ಲಿ ನಿರತರಾಗಿದ್ದರೆ, ಈ ಅರ್ಜಿಯ ವಿಚಾರಣೆ ಸಂಬಂಧ ಬೇರೆ ವ್ಯವಸ್ಥೆ ಮಾಡಬೇಕು. ಬೇರೆ ವ್ಯವಸ್ಥೆ ಮಾಡದಿದ್ದರೆ, ಈ ಅರ್ಜಿಯ ವಿಚಾರವಾಗಿ ಸರ್ಕಾರಕ್ಕೆ ಹೇಳಲು ಏನೂ ಇಲ್ಲ ಎಂದು ಭಾವಿಸಬೇಕಾಗುತ್ತದೆ’ ಎಂದು ಹೇಳಿದ ನ್ಯಾಯಾಲಯವು ವಿಚಾರಣೆಯನ್ನು ಫೆ. 21ಕ್ಕೆ ಮುಂದೂಡಿತು.
ಈ ಮೊದಲು ಜ.17ರಂದು ಈ ಅರ್ಜಿಯ ವಿಚಾರಣೆಯನ್ನು ನಿಗದಿ ಮಾಡಲಾಗಿತ್ತು. ಆ ದಿನವೂ ಮೆಹ್ತಾ ಅವರು ವಿಚಾರಣೆಗೆ ಗೈರಾಗಿದ್ದರು. ಈ ವೇಳೆ, ‘ಅನವಶ್ಯಕವಾಗಿ ಜನರನ್ನು ಜೈಲಿನಲ್ಲಿ ಇರಿಸುವುದು ಸರಿಯಲ್ಲ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.