ಶುಕ್ರವಾರ, ಡಿಸೆಂಬರ್ 2, 2022
20 °C

ಟಿಎಂಸಿಯ 21 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಮಿಥುನ್ ಚಕ್ರವರ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ 21 ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ನಾಯಕ, ನಟ ಮಿಥುನ್ ಚಕ್ರವರ್ತಿ ಶನಿವಾರ ಪುನರುಚ್ಚರಿಸಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಲಿವುಡ್ ತಾರೆ, ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಯ 38 ಶಾಸಕರು ವಿರೋಧ ಪಕ್ಷದ ಸಂಪರ್ಕದಲ್ಲಿದ್ದಾರೆ. ಈ ಪೈಕಿ 21 ಶಾಸಕರು ನೇರವಾಗಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಜುಲೈನಲ್ಲಿ ನಾನು ಹೇಳಿದ ಮಾತಿಗೆ ಬದ್ಧವಾಗಿದ್ದೇನೆ. ಸ್ವಲ್ಪ ಕಾಯಿರಿ, ನಿಮಗೆ ಎಲ್ಲವೂ ತಿಳಿಯುತ್ತದೆ ಎಂದು ಹೇಳಿದರು.

ಇದನ್ನೂ ಓದಿ: 

ಟಿಎಂಸಿ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸುವುದಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ವಿರೋಧದ ಬಗ್ಗೆ ಅರಿವಿದೆ. ನಾನು ಮೂರ್ಖನಲ್ಲ. ಮತ್ತದೇ ತಪ್ಪು ಪುನರಾವರ್ತನೆಯಾಗುವುದಿಲ್ಲ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು