ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: 213 ಜನರಿಗೆ ಕೋವಿಡ್‌ ಸೋಂಕು, 3 ತಿಂಗಳಲ್ಲೇ ಕನಿಷ್ಠ

3,610 ಸಕ್ರಿಯ ಪ್ರಕರಣ, ಶೇ 0.30ಕ್ಕೆ ಇಳಿದ ಪಾಸಿಟಿವ್‌ ಪ್ರಮಾಣ
Last Updated 12 ಜೂನ್ 2021, 14:27 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣದಲ್ಲಿ ದಿನೇದಿನೇ ತೀವ್ರ ಸ್ವರೂಪದ ಇಳಿಕೆ ಕಂಡುಬಂದಿದ್ದು, ಶನಿವಾರ ಕೇವಲ 213 ಹೊಸ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾ ದ್ವಿತೀಯ ಅಲೆ ಆರಂಭ ಆದಾಗನಿಂದ, ಇದುವರೆಗಿನ ಮೂರು ತಿಂಗಳ ಅವಧಿಯಲ್ಲಿ ಮೊದಲ ಬಾರಿಗೆ ಹೊಸ ಪ್ರಕರಣಗಳ ಸಂಖ್ಯೆ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,610ಕ್ಕೆ ಇಳಿದಿರುವುದು ಸಾರ್ವಜನಿಕರ ಆತಂಕ ಕಡಿಮೆ ಮಾಡಿದೆ.

ಶನಿವಾರ ಸಂಜೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ ಒಟ್ಟು 71,513 ಜನರಲ್ಲಿ ಶೇ 0.30ರ ಪ್ರಮಾಣದಲ್ಲಿ ಸೋಂಕು ದೃಢಪಟ್ಟಿದೆ.

ಇದೇ ಅವಧಿಯಲ್ಲಿ 497 ಜನ ಗುಣಮುಖರಾಗಿದ್ದಾರೆ. 28 ಜನ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡಿದ್ದು, ಸಾವಿಗೀಡಾದವರ ಒಟ್ಟು ಸಂಖ್ಯೆ 24,800 ತಲುಪಿದೆ.

2020ರ ಮಾರ್ಚ್‌ನಿಂದ ಇದುವರೆಗೆ 14,30,884 ಜನರಲ್ಲಿ ಸೋಂಕು ಪತ್ತೆಯಾಗಿದ್ದರೆ, 14,02,424 ಜನ ಗುಣಮುಖರಾಗಿದ್ದಾರೆ.

ಏಪ್ರಿಲ್‌ 16ರಿಂದ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಅನ್ನು ಕಳೆದ ಸೋಮವಾರದಿಂದ ಭಾಗಶಃ ತೆರವುಗೊಳಿಸಲಾಗಿದ್ದು, ಮಾರುಕಟ್ಟೆಗಳಲ್ಲಿನ ಅಂಗಡಿಗಳನ್ನು ಸಮ–ಬೆಸ ಸಂಖ್ಯೆಯ ಆಧಾರದಲ್ಲಿ ತೆರೆಯಲು ಅವಕಾಶ ನೀಡಲಾಗಿದೆ. ಸಾರ್ವಜನಿಕರಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಬೀದಿ–ಬೀದಿಗಳಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT