ಗುರುವಾರ , ಮಾರ್ಚ್ 30, 2023
21 °C

ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಕಂದಕಕ್ಕೆ ಬಸ್ ಬಿದ್ದು 22 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಬುಧವಾರ ಬಸ್ಸೊಂದು ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 22 ಪ್ರಯಾಣಿಕರು ಸಾವಿಗೀಡಾಗಿ, 8 ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಬಲೂಚ್ ಪ್ರದೇಶದಿಂದ ಪಂಜಾಬ್ ಪ್ರಾಂತ್ಯದ ರಾವಲ್ಪಿಂಡಿಗೆ ಬಸ್ ಸಂಚರಿಸುತ್ತಿದ್ದಾಗ ‌‌ಸುಧುನೋತಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಬಸ್ 500 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ. 

‘ಕಂದಕಕ್ಕೆ ಬಸ್ ಬೀಳುತ್ತಿದ್ದನ್ನು ನೋಡಿದ ಬೀದಿಬದಿಯ ವ್ಯಾಪಾರಿಯೊಬ್ಬರು, ಸ್ಥಳೀಯ ಗ್ರಾಮದ ಮಸೀದಿಯೊಂದರ ಧಾರ್ಮಿಕ ಮುಖಂಡರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ’ ಎಂದು ‘ಡಾನ್’ ಪತ್ರಿಕೆ ವರದಿ ಮಾಡಿದೆ.

‘ವಿಷಯ ತಿಳಿದ ಧಾರ್ಮಿಕ ಮುಖಂಡ ಮಸೀದಿಯ ಲೌಂಡ್ ಸ್ಪೀಕರ್‌ನಲ್ಲಿ ರಕ್ಷಣಾ ಕಾರ್ಯಕ್ಕೆ ಧಾವಿಸುವಂತೆ ಗ್ರಾಮಸ್ಥರಿಗೆ ಕರೆ ನೀಡಿದ್ದಾರೆ’ ಎಂದೂ ಪತ್ರಿಕೆಯ ವರದಿಯಲ್ಲಿ ತಿಳಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು