ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಕಳೆದ ಏಳು ವರ್ಷಗಳಲ್ಲಿ 22 ಪ್ರಶ್ನೆ ಪತ್ರಿಕೆ ಸೋರಿಕೆ: ಕಾಂಗ್ರೆಸ್

Last Updated 14 ಅಕ್ಟೋಬರ್ 2022, 14:36 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್‌ನ ಬಿಜೆಪಿ ಸರ್ಕಾರವು ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದು, ಕಳೆದ ಏಳು ವರ್ಷಗಳಲ್ಲಿ ರಾಜ್ಯದಲ್ಲಿ ಕನಿಷ್ಠ 22 ಪಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

ಬಿಜೆಪಿಯ ಗೌರವ ಯಾತ್ರೆಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ರಾಜ್ಯದಲ್ಲಿ 22 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಬಿಜೆಪಿ ಸರ್ಕಾರವು ಯುವಕರ ಭವಿಷ್ಯವನ್ನು ಗಾಳಿಗೆ ತೂರಿದೆ ಎಂದು ಆರೋಪಿಸಿದರು.

ಯುವ ಜನತೆಯ ಭವಿಷ್ಯವನ್ನು ಪಣಕ್ಕಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಂದ ಯುವಕರ ಬಳಿ ಹೋಗಿ ಮತ ಯಾಚಿಸಲು ಹೇಗೆ ಸಾಧ್ಯ ಎಂದು ಕೇಳಿದರು.

ಮತ್ತೊಂದೆಡೆ ಭಾರತ್ ಜೋಡೊ ಯಾತ್ರೆಯಲ್ಲಿ ನಾಯಕ ರಾಹುಲ್ ಗಾಂಧಿಗೆ ಉತ್ತಮ ಜನ ಬೆಂಬಲ ದೊರಕುತ್ತಿದೆ ಎಂದು ಅವರು ಉಲ್ಲೇಖಿಸಿದರು.

ರಾಜ್ಯದಲ್ಲಿ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗುತ್ತಿಲ್ಲ. ನಡೆಸಿದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿವೆ ಮತ್ತು ಪರೀಕ್ಷೆಯನ್ನು ಮುಂದೂಡಲಾಗುತ್ತಿದೆ. ಎಲ್ಲೆಡೆ ನಿರುದ್ಯೋಗ ಸಮಸ್ಯೆಯಿದ್ದು, ಯುವಕರ ದನಿಯನ್ನು ನಿಮ್ಮ ಮುಂದಿಡುತ್ತಿದ್ದೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT