ಭಾನುವಾರ, ಮಾರ್ಚ್ 26, 2023
23 °C

‘ಜಮ್ಮು– ಕಾಶ್ಮೀರ: ಯಾರೊಬ್ಬರೂ ಗೃಹ ಬಂಧನದಲ್ಲಿಲ್ಲ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಯಾರೊಬ್ಬರನ್ನು ಗೃಹ ಬಂಧನದಲ್ಲಿ ಇರಿಸಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ.ಕಿಶನ್‌ ರೆಡ್ಡಿ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.  

370ನೇ ವಿಧಿ ರದ್ದತಿ ಮತ್ತು ಕೇಂದ್ರಾಡಳಿತ ಪ್ರದೇಶವಾದ ನಂತರ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವು ವ್ಯಕ್ತಿಗಳನ್ನು ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ತಿಳಿಸಿದೆ. ಸೆ.11ರವರೆಗೆ 223 ಮಂದಿಯನ್ನು ಸೆರೆಯಲ್ಲಿಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ್ದಾರೆ. 

ಆ.5, 2019ರಲ್ಲಿ ರಾಜ್ಯವನ್ನು ವಿಭಜಿಸಿದ ನಂತರ ಭಯೋತ್ಪಾದಕ ಕೃತ್ಯಗಳು ಗಣನೀಯವಾಗಿ ಕಡಿಮೆಯಾಗಿವೆ. ಜೂನ್‌ 29, 2018ರಿಂದ ಆ.4, 2018ರವರೆಗೆ 455 ಭಯೋತ್ಪಾದಕ ಕೃತ್ಯಗಳು ನಡೆದಿದ್ದರೆ, 2019ರಿಂದ ಇದೇ ಸೆ.9ರವರೆಗೆ 211 ಘಟನೆಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು