ಸೋಮವಾರ, ಜನವರಿ 17, 2022
21 °C

ಒಡಿಶಾ: 23 ಓಮೈಕ್ರಾನ್ ಪ್ರಕರಣ ದೃಢ, ಒಟ್ಟು ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಒಡಿಶಾದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ‘ಓಮೈಕ್ರಾನ್’ ದೃಢಪಟ್ಟ 23 ಪ್ರಕರಣಗಳು ದಾಖಲಾಗಿವೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಇದರೊಂದಿಗೆ ರಾಜ್ಯದಲ್ಲಿ ಓಮೈಕ್ರಾನ್ ದೃಢಪಟ್ಟ ಪ್ರಕರಣಗಳ ಸಂಖ್ಯೆ 37 ಕ್ಕೆ ಏರಿಕೆಯಾಗಿದೆ ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ನಿರ್ದೇಶಕ ನಿರಂಜನ್‌ ಮಿಶ್ರಾ ತಿಳಿಸಿದ್ದಾರೆ. 

ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ‘ ಟ್ವೀಟ್‌ ಮಾಡಿದೆ.

 

 ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 27,553 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು