ಭಾನುವಾರ, ಮೇ 22, 2022
22 °C

ಕೇಂದ್ರೀಯ ವಿವಿಗಳಲ್ಲಿ 5 ವರ್ಷದಲ್ಲಿ 24 ವಿದ್ಯಾರ್ಥಿಗಳ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳ 24 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ರಾಜ್‌ಕುಮಾರ್‌ ರಂಜನ್‌ ಸಿಂಗ್‌ ಸೋಮವಾರ ಲೋಕಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ‘ವಿದ್ಯಾರ್ಥಿಗಳ ಮೇಲಾಗುವ ಕಿರುಕುಳ ಮತ್ತು ತಾರತಮ್ಯದ ವಿಚಾರವಾಗಿ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಅಧ್ಯಯನ ನಡೆಸಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡದಿಂದ ಹೊರಬರಲು ಶಿಕ್ಷಣ ಸಚಿವಾಲಯವು ಪ್ರಾದೇಶಿಕ ಭಾಷೆಗಳಲ್ಲಿ ಆಪ್ತ ಸಮಾಲೋಚನೆ, ತಾಂತ್ರಿಕ ಶಿಕ್ಷಣದಂತಹ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೋವಿಡ್‌ ಸಂದಿಗ್ಧ ಕಾಲದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬದ ಮಾನಸಿಕ ಸದೃಢತೆಗಾಗಿ ಕೇಂದ್ರ ಸರ್ಕಾರವು ಮನೋದರ್ಪಣ ಹೆಸರಿನ ಯೋಜನೆ ಮೂಲಕ ಹಲವು ಚಟುವಟಿಕೆಗಳನ್ನು ಕೈಗೊಂಡಿದೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು