ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದಲ್ಲಿ 24 ಭಾರತೀಯ ಮೀನುಗಾರರ ಬಂಧನ

Last Updated 29 ನವೆಂಬರ್ 2022, 12:40 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ಶ್ರೀಲಂಕಾದ ಜಲ ಗಡಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು 24 ಭಾರತೀಯ ಮೀನುಗಾರರನ್ನು ಬಂಧಿಸಿ, ಅವರ ಐದು ದೋಣಿಗಳನ್ನು ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

‘ಉತ್ತರ ಜಾಫ್ನಾ ಪರ್ಯಾಯ ದ್ವೀಪದಕಾರೈನಗರ್‌ ಕರಾವಳಿಯಲ್ಲಿ ಶ್ರೀಲಂಕಾ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆ ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ. ನಂತರ ಅವರನ್ನು ಕಂಕೆಸಂತುರೈ ಬಂದರಿಗೆ ಕರೆತಂದು ಮೀನುಗಾರಿಕಾ ವಿಭಾಗದ ಕಚೇರಿಗೆ ಹಸ್ತಾಂತರಿಸಲಾಯಿತು’ ಎಂದು ನೌಕಾಪಡೆ ತಿಳಿಸಿದೆ.

ಶ್ರೀಲಂಕಾದ ಜಲ ಗಡಿಯೊಳಗೆ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಈವರೆಗೆ ಒಟ್ಟು 252 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಅದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT