ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ | ಪುರಾತನ ದೇಗುಲದ ಬಾವಿಯ ಛಾವಣಿ ಕುಸಿತ; 25 ಜನ ಸಿಲುಕಿರುವ ಶಂಕೆ

Last Updated 30 ಮಾರ್ಚ್ 2023, 10:05 IST
ಅಕ್ಷರ ಗಾತ್ರ

ಇಂದೋರ್‌: ರಾಮನವಮಿ ಆಚರಣೆ ಸಂದರ್ಭದಲ್ಲಿ ಇಲ್ಲಿನ ಪ್ರಾಚೀನ ದೇವಾಲಯವೊಂದರ ಬಾವಿಯ ಛಾವಣಿ ಕುಸಿದಿದೆ. ಈ ವೇಳೆ ಸುಮಾರು 25 ಮಂದಿ ಒಳಗೆ ಬಿದ್ದಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಭಾರಿ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಭಾರ ಹೆಚ್ಚಾಗಿ ಪುರಾತನ ಬಾವಿಯ ಛಾವಣಿ ಕುಸಿದಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆ ಸಂಬಂಧ ಕಳವಳ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

'ಇಂದೋರ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತುಂಬಾ ನೋವಾಗಿದೆ. ಮುಖ್ಯಮಂತ್ರಿ ಶಿವರಾಜ್‌ ಚೌಹಾಣ್‌ ಅವರೊಂದಿಗೆ ಮಾತನಾಡಿ, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ರಾಜ್ಯ ಸರ್ಕಾರವು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿದೆ. ಸಂತ್ರಸ್ತರು ಹಾಗೂ ಅವರ ಕುಟುಂಬದವರಿಗಾಗಿ ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT