ಗುರುವಾರ , ಮೇ 6, 2021
25 °C

ಕಳ್ಳಸಾಗಣೆ: 25 ಕೆ.ಜಿ ತೂಕದ ವಿದೇಶಿ ಗುರುತಿನ ಚಿನ್ನ ವಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ಗುವಾಹಟಿಯಿಂದ ಹೈದರಾಬಾದ್‌ಗೆ ಕಳ್ಳಸಾಗಣೆ ಮಾಡುತ್ತಿದ್ದ ₹11.63 ಕೋಟಿ ಮೌಲ್ಯದ 25 ಕೆ.ಜಿ ತೂಕದ ವಿದೇಶಿ ಗುರುತಿನ ಚಿನ್ನವನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ.

ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎಸ್‌ಯುವಿ ವಾಹನ ಹಾಗೂ ಅದರಲ್ಲಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ತಿಳಿಸಿದೆ.

ಮೂರೂ ಜನರನ್ನೂ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಗುಪ್ತಚರ ಇಲಾಖೆ ಮಾಹಿತಿಯಂತೆ ಡಿಆರ್‌ಐ ಅಧಿಕಾರಿಗಳು ವಿಜಯವಾಡ– ಹೈದರಾಬಾದ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಣ್ಗಾವಲು ವ್ಯವಸ್ಥೆ ಮಾಡಿದ್ದರು. ಪಂತಂಗಿ ಟೋಲ್‌ ಪ್ಲಾಜಾ ಸಮೀಪ ಎಸ್‌ಯುವಿ ವಾಹನವನ್ನು ಪರಿಶೀಲಿಸಿದಾಗ ಅಕ್ರಮ ಚಿನ್ನ ಸಾಗಣೆ  ಪತ್ತೆಯಾಯಿತು. ಏರ್‌ ಬ್ಯಾಗ್‌ ತೆಗೆದಾಗ ಡ್ಯಾಶ್‌ಬೋರ್ಡ್‌ನಲ್ಲಿ ಅಡಗಿಸಿಟ್ಟಿದ್ದ ಚಿನ್ನದ ಬಿಸ್ಕೀಟುಗಳು ಪತ್ತೆಯಾದವು ಎಂದು ಡಿಆರ್‌ಐ ಪ್ರಕಟಣೆಯಲ್ಲಿ ತಿಳಿಸಿದೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು