ಗುರುವಾರ , ಡಿಸೆಂಬರ್ 2, 2021
19 °C

26/11ರ ಮುಂಬೈ ದಾಳಿ: ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬೈ ಮೇಲಿನ 26/11ರ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಹಾಗೂ ಮೃತಪಟ್ಟವರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.

‘ತಮ್ಮ ಪ್ರಾಣ ಪಣಕ್ಕಿಟ್ಟು, ಉಗ್ರರ ವಿರುದ್ಧ ಹೋರಾಡಿದ ಹಾಗೂ ಹುತಾತ್ಮರಾದ ಯೋಧರ ಧೈರ್ಯ–ಸಾಹಸಕ್ಕೆ ದೇಶ ಸದಾ ಕೃತಜ್ಞವಾಗಿರುತ್ತದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಓದಿ: ಮುಂಬೈ ದಾಳಿಗೆ ಯುಪಿಎ ಪ್ರತಿಕ್ರಿಯೆ ಜಡ; ಕಾಂಗ್ರೆಸ್‌ಗೆ ಮುಜುಗರ ತಂದ ಮನೀಶ್‌ ಕೃತಿ

ರಾಹುಲ್‌ಗಾಂಧಿಯಿಂದ ಗೌರವ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಸಹ ಮುಂಬೈ ಮೇಲಿನ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಓದಿ: 

ಹುತಾತ್ಮ ಯೋಧರ ಭಾವಚಿತ್ರಗಳಿರುವ ಎರಡು ನಿಮಿಷದ ವಿಡಿಯೊವೊಂದನ್ನು ಅವರು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ‘26/11 ಮುಂಬೈ ಭಯೋತ್ಪಾದಕ ದಾಳಿ ಘಟನೆಯ ಹೀರೊಗಳಿಗೆ ವಂದನೆಗಳು’ ಎಂದು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು