ಶನಿವಾರ, ಮೇ 21, 2022
23 °C

ತಿರುಪತಿಯಲ್ಲಿ ನವೆಂಬರ್‌ 14ರಂದು ದಕ್ಷಿಣ ವಲಯ ಮಂಡಳಿ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ದಕ್ಷಿಣ ವಲಯ ಮಂಡಳಿಯ 29ನೇ ಸಭೆಯು ಆಂಧ್ರಪ್ರದೇಶದ ತಿರುಪತಿಯಲ್ಲಿ ನವೆಂಬರ್‌ 14ರಂದು ನಡೆಯಲಿದೆ. ಕರ್ನಾಟಕವು ಸೇರಿದಂತೆ ಐದು ರಾಜ್ಯಗಳ ಮುಖ್ಯಮಂತ್ರಿಗಳು, ಎರಡು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನಂಟ್‌ ಗವರ್ನರ್‌ಗಳು ಸಭೆಯಲ್ಲಿ ಭಾಗವಹಿಸುವರು. 

ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದ ಲೆಫ್ಟಿನಂಟ್ ಗವರ್ನರ್‌ಗಳು ಈ ಸಭೆಯಲ್ಲಿ ಭಾಗವಹಿಸುವರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆ ವಹಿಸುವರು.

ಸಭೆಯಲ್ಲಿ ಕೇಂದ್ರ ಸರ್ಕಾರ ಸಲಹೆ ಮಾಡಿರುವ ನಾಲ್ಕು ವಿಷಯಗಳು ಸೇರಿದಂತೆ 26 ವಿಷಯಗಳು ಚರ್ಚೆಗೆ ಬರಲಿವೆ. ಕರ್ನಾಟಕವು ತುಂಗಭದ್ರಾ, ಕೃಷ್ಣಾ ನದಿಗೆ ಅನ್ವಯಿಸಿ ಕೈಗೊಳ್ಳಬೇಕಾದ ನೀರಾವರಿ ಯೋಜನೆಗಳ ಬಗ್ಗೆ ನೆರೆಯ ಆಂಧ್ರಪ್ರದೇಶ, ತೆಲಂಗಾಣಗಳು ತಕರಾರು ಹೊಂದಿವೆ. ಈ ವಿಷಯವೂ ಚರ್ಚೆಗೆ ಬರಲಿದೆ.

ಅಲ್ಲದೆ ನೀರಾವರಿ ಯೋಜನೆಗಳು, ಗಡಿ, ಭೂ ವಿವಾದ, ಮೆಟ್ರೊ ಮತ್ತು ವಿವಿಧ ರೈಲ್ವೆ ಯೋಜನೆಗಳಿಗೆ ಭೂಮಿ ಹಂಚಿಕೆ ವಿಷಯಗಳು ಸೇರಿದಂತೆ ವಿವಿಧ ರಾಜ್ಯಗಳ ನಡುವೆ ಇರುವ ವಿವಾದಗಳನ್ನು ಒಳಗೊಂಡ ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು