ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಟ್ಟ ಮಂಜು: 260ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

Last Updated 9 ಜನವರಿ 2023, 12:44 IST
ಅಕ್ಷರ ಗಾತ್ರ

ನವದೆಹಲಿ: ದಟ್ಟ ಮಂಜಿನಿಂದ ಕೂಡಿದ ವಾತಾವರಣವಿದ್ದ ಕಾರಣ 260ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ಸೋಮವಾರ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

82 ಎಕ್ಸ್‌ಪ್ರೆಸ್‌ ರೈಲುಗಳ, 140 ಪ್ಯಾಸೆಂಜರ್‌ ರೈಲುಗಳ ಮತ್ತು 40 ಉಪನಗರ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದೂ ವಿವರಿಸಿದ್ದಾರೆ.

ಉತ್ತರ ಭಾರತದಲ್ಲಿ ತೀವ್ರ ಚಳಿ (ಪಿಟಿಐ ವರದಿ): ಉತ್ತರ ಮತ್ತು ವಾಯವ್ಯ ಭಾರತದಲ್ಲಿ ಅತಿಯಾದ ಚಳಿ ಹಾಗೂ ದಟ್ಟ ಮಂಜು ಮುಸುಕಿದ ವಾತಾವರಣ ಮುಂದುವರಿದಿದೆ.

ಉತ್ತರಪ್ರದೇಶದ ಉನ್ನಾವ್‌ನಲ್ಲಿ ಬಸ್ಸೊಂದು ಟ್ರಕ್‌ಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಐದನೇ ದಿನವೂ ಶೀತಗಾಳಿ ಮುಂದುವರಿದಿದ್ದು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಕ್ಕಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ.

30 ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾದಲ್ಲೂ ಶೀತಗಾಳಿ ಬೀಸುತ್ತಿದ್ದು, ಸಿಮಿಲಿಗುಡದಲ್ಲಿ 3.7 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗುಲ್‌ಮಾರ್ಗ್‌, ಸೋನಮಾರ್ಗ್‌ ಮೊದಲಾದೆಡೆ ಹಿಮಪಾತ ಹೆಚ್ಚಾಗಿದೆ ಎಂದೂ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT