ಗುರುವಾರ , ಮೇ 26, 2022
26 °C

2.71 ಲಕ್ಷ ಹೊಸ ಪ್ರಕರಣ: ಕೋವಿಡ್ ದೃಢ ಪ್ರಮಾಣ ಅಲ್ಪ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ 2,71,202 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ಅವಧಿಯಲ್ಲಿ 314 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಕೇರಳ, ಮಹಾರಾಷ್ಟ್ರ, ದೆಹಲಿಯಲ್ಲಿ ವೃತರ ಸಂಖ್ಯೆ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

‌ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,50,377ಕ್ಕೆ ತಲುಪಿದ್ದು, ಕೋವಿಡ್ ದೃಢ ಪ್ರಮಾಣ 16.28ರಷ್ಟಿದೆ. 7,743ಓಮೈಕ್ರಾನ್‌ ಪ್ರಕರಣಗಳು ವರದಿಯಾಗಿವೆ. 

ಇದು ಹಿಂದಿನ ದಿನಕ್ಕೆ ಹೋಲಿಸಿದರೆ ಕೋವಿಡ್ ದೃಢ ಪ್ರಮಾಣದಲ್ಲಿ  ಅಲ್ಪ ಇಳಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು