ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಂಚಿ ಹಿಂಸಾಚಾರ: 29 ಗಲಭೆಕೋರರ ಬಂಧನ; ನಿಷೇಧಾಜ್ಞೆ ಮುಂದುವರಿಕೆ

ಅಕ್ಷರ ಗಾತ್ರ

ರಾಂಚಿ: ಜೂನ್ 10 ರಂದು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 29 ಗಲಭೆಕೋರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ಮಾಹಿತಿ ನೀಡಿದ್ದಾರೆ.

ಉಳಿದ ದುಷ್ಕರ್ಮಿಗಳನ್ನು ಬಂಧಿಸಲು ಕ್ರಮ ಕೈಗೊಂಡಿದ್ದೇವೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು. ಕೋಮು ಸಂಘರ್ಷವನ್ನು ತಡೆಯಲು ನಿಷೇದಾಜ್ಞೆಯನ್ನು ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

‘ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 29 ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಹನ್ನೆರಡು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಏಳು ಮಂದಿ ರಾಂಚಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಂದಿಯ ವಿರುದ್ಧ ಸೆಕ್ಷನ್ 151 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ’ ಜಾರ್ಖಂಡ್ ಪೊಲೀಸ್ ವಕ್ತಾರ ಮತ್ತು ಐಜಿ ಅಮೋಲ್ ಹೋಮ್ಕರ್ ತಿಳಿಸಿದ್ದಾರೆ.

ಪ್ರವಾದಿ ಮಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಮುಖಂಡರಾದ ನೂಪುರ್‌ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸಬೇಕೆಂದು ಜೂನ್ 10 ರಂದು ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರ ಗುಂಡಿಗೆ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT