ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆಯಲ್ಲಿ 2,98,428 ಹುದ್ದೆಗಳು ಖಾಲಿ: ಸಚಿವ ಅಶ್ವಿನಿ ವೈಷ್ಣವ್

Last Updated 16 ಮಾರ್ಚ್ 2022, 16:06 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರೈಲ್ವೆಯಲ್ಲಿ ಒಟ್ಟು 2,98,428 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್‌ಲೈನ್ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಮತ್ತು ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ ಎಂದು ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.

ಪರಿಶಿಷ್ಟ ಜಾತಿಯವರಿಗೆ ಮೀಸಲಾದ 20,944 ಹುದ್ದೆಗಳು ಮತ್ತು ಪರಿಶಿಷ್ಟ ಪಂಗಡದ 10,930 ಹುದ್ದೆಗಳು ಸೇರಿದಂತೆ ಒಟ್ಟು 1,40,713 ಹುದ್ದೆಗಳು ಪ್ರಸ್ತುತ ಹಂತ-1 ರಿಂದ ಹಂತ-7 ರವರೆಗೆ ನೇಮಕಾತಿ ಹಂತದಲ್ಲಿವೆ ಎಂದು ರೈಲ್ವೆ ಸಚಿವರು ತಿಳಿಸಿದ್ದಾರೆ.

ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆ ವಿರುದ್ಧ ಉದ್ಯೋಗ ಆಕಾಂಕ್ಷಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ನಂತರ ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಷ್ಟ್ರೀಯ ಟ್ರಾನ್ಸ್‌ಪೋರ್ಟರ್ ತನ್ನ ಎನ್‌ಟಿಪಿಸಿ ಮತ್ತು ಲೆವೆಲ್ 1 ಪರೀಕ್ಷೆಗಳನ್ನು ಅಮಾನತುಗೊಳಿಸಬೇಕಾಯಿತು.

ಜೂನಿಯರ್ ಕ್ಲರ್ಕ್, ಟ್ರೈನ್ ಅಸಿಸ್ಟೆಂಟ್, ಗಾರ್ಡ್, ಟೈಂ ಕೀಪರ್‌ನಿಂದ ಸ್ಟೇಷನ್ ಮಾಸ್ಟರ್‌ವರೆಗೆ ವಿವಿಧ ವರ್ಗಗಳಲ್ಲಿ ಖಾಲಿ ಇರುವ 35,281 ಹುದ್ದೆಗಳಿಗೆ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್‌ಟಿಪಿಸಿ) ನೇಮಕಾತಿ ಅಭಿಯಾನ ಕೂಡ ಬಿಹಾರ, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

7 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಶಾರ್ಟ್ ಲಿಸ್ಟ್ ಆಗಿವೆ. ಆದರೆ 3.84 ಲಕ್ಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಏಕೆಂದರೆ, ಒಂದೇ ವ್ಯಕ್ತಿ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಶಾರ್ಟ್‌ಲಿಸ್ಟ್ ಆಗಿರಬಹುದು ಎಂದು ಆಕಾಂಕ್ಷಿಗಳು ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT