ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಆರ್‌ಎಸ್‌ ಶಾಸಕರ ಖರೀದಿ ಪ್ರಕರಣ: ಮೂವರಿಗೆ ಜಾಮೀನು

Last Updated 1 ಡಿಸೆಂಬರ್ 2022, 14:23 IST
ಅಕ್ಷರ ಗಾತ್ರ

ಹೈದರಾಬಾದ್‌: ಭಾರತ ರಾಷ್ಟ್ರ ಸಮಿತಿಯ (ಬಿಆರ್‌ಎಸ್‌) ಶಾಸಕರನ್ನು ಖರೀದಿಸಲು ಯತ್ನಿಸಲಾಗಿತ್ತೆಂಬ ಆರೋಪದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಮೂವರು ಆರೋಪಿಗಳಿಗೆ ತೆಲಂಗಾಣ ಹೈಕೋರ್ಟ್‌ಗುರುವಾರ ಷರತ್ತುಬದ್ಧ ಜಾಮೀನು ನೀಡಿದೆ.

ರಾಮಚಂದ್ರ ಭಾರತಿ ಅಲಿಯಾಸ್ ಸತಿಶ್ ಶರ್ಮಾ, ನಂದಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ಅವರ ಜಾಮೀನು ಕೋರಿಕೆ ಅರ್ಜಿಗಳನ್ನು ಕೋರ್ಟ್‌ ಪರಿಗಣಿಸಿತು.ಮೂವರು ಆರೋಪಿಗಳಿಗೂ ತಲಾ ₹3 ಲಕ್ಷದ ವೈಯಕ್ತಿಕ ಬಾಂಡ್‌ ಜತೆಗೆ ಇಬ್ಬರ ಶ್ಯೂರಿಟಿ ನೀಡಬೇಕು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ಪ್ರತಿ ಸೋಮವಾರ ಹಾಜರಾಗಬೇಕು ಎನ್ನುವ ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ.

ಶಾಸಕರಖರೀದಿಗೆ ಹಣದ ಆಮಿಷವೊಡ್ಡಿರುವ ಸಂಬಂಧ ಬಿಆರ್‌ಎಸ್‌ ಶಾಸಕ ಪೈಲಟ್‌ ರೋಹಿತ್‌ ರೆಡ್ಡಿ ಸೇರಿ ನಾಲ್ವರು ಶಾಸಕರು, ಅಕ್ಟೋಬರ್‌ 26ರಂದು ದೂರು ನೀಡಿದ್ದರು. ನಗರ ಪೊಲೀಸರು ಪ್ರಕರಣ ದಾಖಲಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದರು. ಸದ್ಯ ಮೂವರೂ ಜೈಲಿನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT