ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾ ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಕೊಲೆ ಯತ್ನ: ಮೂವರ ಬಂಧನ

Last Updated 7 ಆಗಸ್ಟ್ 2021, 7:57 IST
ಅಕ್ಷರ ಗಾತ್ರ

ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅವರು ಇಲ್ಲಿನ ಶ್ಯಾಮ್‌ಪ್ರಸಾದ್‌ ಮುಖರ್ಜಿ ಲೇನ್‌ಲ್ಲಿರುವ ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದಾಗ, ಈ ಮೂವರು ವ್ಯಕ್ತಿಗಳು ಭದ್ರತೆಯನ್ನು ಭೇದಿಸಿ, ಮುಖ್ಯಮಂತ್ರಿ ಅವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿಯವರು ಮಿಂಚಿನ ವೇಗದಲ್ಲಿ ಪಕ್ಕಕ್ಕೆ ಜಿಗಿದರು. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು.

ಮುಖ್ಯಮಂತ್ರಿ ಭದ್ರತೆಗಾಗಿ ನಿಯೋಜಿಸಿದ್ದ ಸಿಬ್ಬಂದಿಯು ಈ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ, ಪ್ರಯೋಜನವಾಗಲಿಲ್ಲ ಎಂದು ಅವರು ವಿವರಿಸಿದರು.

ಮುಖ್ಯಮಂತ್ರಿ ಕೊಲೆಗೆ ಯತ್ನಿಸಿದ ಈ ಮೂವರನ್ನು ಗುರುವಾರ ತಡರಾತ್ರಿ ಕೆರ್ಚೌಮಹಾನಿಯಲ್ಲಿ ಪೊಲೀಸರು ಬಂಧಿಸಿ, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ಅವರನ್ನು ಸಿಜೆಎಂ ನ್ಯಾಯಾಧೀಶ ಪಿ.ಪಿ.ಪೌಲ್ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಮೂವರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು ಎಂದು ಅವರು ಮಾಹಿತಿ ನೀಡಿದರು.

20ರ ವಯಸ್ಸಿನ ಆಸುಪಾಸಿನ ಈ ಮೂವರು ಯುವಕರು, ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟ್ ವಿದ್ಯುತ್‌ ಸೂತ್ರಧಾರ್ ಹೇಳಿದ್ದಾರೆ.

‘ಆರೋಪಿಗಳನ್ನು, ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದೆವು. ಆದರೆ, ನ್ಯಾಯಾಧೀಶರು ಆ.19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಅವರನ್ನು ಜೈಲಿನಲ್ಲೇ ವಿಚಾರಣೆ ನಡೆಸಲಿದ್ದಾರೆ‘ ಎಂದು ಸೂತ್ರಧಾರ್ ಸುದ್ದಿ ಸಂಸ್ಥೆಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT