ಕೋಲ್ಕತ್ತ: ಅಪಾರ ಪ್ರಮಾಣದ ಸ್ಫೋಟಕ ಮತ್ತು ಮದ್ದುಗುಂಡುಗಳನ್ನು ಸಾಗಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಗಿಳಿದ ಪಶ್ಚಿಮ ಬಂಗಾಳದ ವಿಶೇಷ ಕಾರ್ಯ ಪಡೆ(ಎಸ್‌ಟಿಎಫ್) ಪೊಲೀಸರು, ಕೋಲ್ಕತ್ತದಿಂದ 30 ಕಿ.ಮೀ ದೂರದ ಶಹಾಸನ್ ಎಂಬಲ್ಲಿ ಈ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಕೆ.ಜಿ ಸ್ಫೋಟಕಗಳು, ಶಸ್ತ್ರಾಸ್ತ್ರದೊಂದಿಗೆ 20 ಸುತ್ತು ಮದ್ದುಗುಂಡುಗಳು ಹಾಗೂ ₹40ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

’ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇವರ ಹಿಂದೆ ಯಾರಿದ್ದಾರೆ, ಯಾರಿಗಾಗಿ ಈ ಸ್ಪೋಟಗಳನ್ನು ಸಾಗಿಸುತ್ತಿದ್ದರು ಎಂಬುದರ ಬಗ್ಗೆ ಪ್ರಶ್ನಿಸಲಾಗುತ್ತಿದೆ. ಇವರಿಗೆ ಅಂತರರಾಜ್ಯ ಅಥವಾ ಅಂತರರಾಷ್ಟ್ರೀಯ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕವಿದೆಯೇ ಎಂಬುದನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಹೇಳಿದರು.

ಕೋಲ್ಕತ್ತದಲ್ಲಿ ಭಾನುವಾರ ಬಂಧಿತರಾಗಿರುವ ಜೆಎಂಬಿ ಭಯೋತ್ಪಾದಕರೊಂದಿಗೆ ಸಂಪರ್ಕವಿರುವುದೆಯೇ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.