ನ್ಯಾಶ್‌ವಿಲ್ಲೆ(ಅಮೆರಿಕ)(ರಾಯಿಟರ್ಸ್): ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ 28 ವರ್ಷದ ಯುವತಿಯೊಬ್ಬಳು ಗುಂಡಿನ ದಾಳಿ ನಡೆಸಿದ್ದು, ಮೂವರು ವಿದ್ಯಾರ್ಥಿಗಳು ಹಾಗೂ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.
ದಾಳಿ ನಡೆಸಿರುವ ಯುವತಿಯನ್ನು ಪೊಲೀಸರು ಗುಂಡಿಟ್ಟು ಸಾಯಿಸಿದ್ದಾರೆ ಎಂದೂ ವಿವರಿಸಿದ್ದಾರೆ. ಯುವತಿ ಈ ಕೃತ್ಯ ಎಸಗಿರುವುದಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ರೈಫಲ್ ಹಾಗೂ ಒಂದು ಪಿಸ್ತೂಲಿನೊಂದಿಗೆ ಬಂದ ಯುವತಿಯು ಗುಂಡಿನ ದಾಳಿ ನಡೆಸಿದ್ದಾಳೆ. ಈ ಶಾಲೆಯಲ್ಲಿ ನರ್ಸರಿಯಿಂದ ಆರನೇ ತರಗತಿ ವರೆಗಿನ ವಿದ್ಯಾರ್ಥಿಗಳು ಕಲಿಯುತ್ತಿದ್ದರು ಎಂದೂ ತಿಳಿಸಿದ್ದಾರೆ.
ಶಾಲೆಯನ್ನು ಸುತ್ತುವರಿದ ಶಸ್ತ್ರಧಾರಿ ಪೊಲೀಸರು ಉಳಿದ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ ಎಂದೂ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.