ಮಂಗಳವಾರ, ಜೂನ್ 15, 2021
22 °C

ಎಲ್ಲರಿಗೂ ತ್ವರಿತವಾಗಿ ಕೊರೊನಾ ಲಸಿಕೆ ದೊರೆಯುವ ಮಾರ್ಗಸೂಚಿ ಸಿದ್ಧ –ಪ್ರಧಾನಿ ಮೋದಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ಮೂರು ಕೊರೊನಾ ವೈರಸ್ ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತಗಳಲ್ಲಿದ್ದು ವಿಜ್ಞಾನಿಗಳು ಸಮ್ಮತಿ ಸೂಚಿಸಿದ ಕೂಡಲೇ ಅಪಾರ ಪ್ರಮಾಣದ ಉತ್ಪಾದನೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದರು.

ದೇಶದ 74ನೇ ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇದೇ ವೇಳೆ  ಹೊಸ ‘ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್’ಯೋಜನೆಯನ್ನು ಘೋಷಣೆ ಮಾಡಿದರು. ಇದರಡಿ ಪ್ರತಿಯೊಬ್ಬ ಭಾರತೀಯನಿಗೂ ಹೆಲ್ತ್ ಐಡಿ ನೀಡಲಾಗುವುದು. ಯೋಜನೆಯಿಂದ ಬಡವರಿಗೆ ಪ್ರಯೋಜನವಾಗಲಿದೆ. ವೈದ್ಯರು ಯಾವ ಔಷಧ ತೆಗದುಕೊಳ್ಳಲು ಸೂಚಿಸಿದ್ದಾರೆ, ಯಾವಾಗ ಅದನ್ನು ಸೂಚಿಸಲಾಗಿದೆ ಎಂಬ ಮಾಹಿತಿ ಜತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳು ವ್ಯಕ್ತಿಯ ಹೆಲ್ತ್ ಐಡಿಗೆ ಲಿಂಕ್ ಆಗಿರಲಿವೆ ಎಂದು ಹೇಳಿದರು.

ಕೋವಿಡ್‌ನ ಮೂರು ಲಸಿಕೆಗಳು ವಿವಿಧ ಹಂತಗಳಲ್ಲಿವೆ. ವಿಜ್ಞಾನಿಗಳು ಒಪ್ಪಿಗೆ ಸೂಚಿಸಿದರೆ ನಾವು ಉತ್ಪಾದನೆಯ ಯೋಜನೆಯೊಂದನ್ನು ಸಿದ್ಧಮಾಡುತ್ತೇವೆ. ಲಸಿಕೆಯು ಪ್ರತಿಯೊಬ್ಬ ಭಾರತೀಯನಿಗೂ ಕಡಿಮೆ ಅವಧಿಯಲ್ಲಿ ಸಿಗುವಂತಹ  ಮಾರ್ಗಸೂಚಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ ಎಂದು ಮೋದಿ ಹೇಳಿದರು.

ದೇಶಾದ್ಯಂತ ವೈರಸ್ ಸೋಂಕು ಹೆಚ್ಚುತ್ತಿದ್ದು  ಲಸಿಕೆಯನ್ನು ಉತ್ಪಾದಿಸಲು ಭಾರತ ಕೂಡ ಇತರೆ ದೇಶಗಳೊಮದಿಗೆ ಪೈಪೋಟಿ ನಡೆಸುತ್ತಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ ಮಾನ್ಯತೆ ಪಡೆದು ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್, ಝೈಡಸ್ ಕ್ಯಾಡಿಲಾ ಮತ್ತು ಸೀರಮ್ ಕಂಪನಿಯ ಮೂರು ಲಸಿಕೆಗಳ ಮಾನವನ ಮೇಲಿನ ಪ್ರಯೋಗ ಈಗಾಗಲೇ ಆರಂಭವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು