ಭಾನುವಾರ, ಮಾರ್ಚ್ 26, 2023
23 °C

ಮಹಾರಾಷ್ಟ್ರದಲ್ಲಿ ಅಗ್ನಿ ಅನಾಹುತ: ಮೂವರ ಸಾವು, ಹಲವರಿಗೆ ಗಾಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮಹಾರಾಷ್ಟ್ರದ ಬೋಯಿಸಾರ್‌ನ ರಾಸಾಯನಿಕ ಕಂಪನಿಯೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಮೂವರು ಸಾವನ್ನಪ್ಪಿದ್ದು ಹಲವರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಪ್ರಸ್ತುತ 11 ಜನರನ್ನು ಬೆಂಕಿಯಿಂದ ರಕ್ಷಿಸಿ ಶಿಂಧೆ ಆಸ್ಪತ್ರೆಗೆ ಸೇರಿಸಲಾಗಿದೆ. ರಾಸಾಯನಿಕ ಬಾಯ್ಲರ್‌ ಸ್ಫೋಟದಿಂದ ಈ ಅನಾಹುತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಹಲವರು ಬೆಂಕಿಯಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು