ಉತ್ತರ ಪ್ರದೇಶ: ಮದುವೆ ಮನೆ ಗೋಡೆ ಕುಸಿದು 5 ವರ್ಷದ ಮಗು ಸೇರಿ ಮೂವರ ಸಾವು

ಲಖನೌ: ಸರೋಜಿನಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಜ್ನೋರ್ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಮದುವೆ ನಡೆಯುತ್ತಿದ್ದ ಕಟ್ಟಡದ ಬಾಲ್ಕನಿ ಮತ್ತು ಗೋಡೆ ಕುಸಿದು ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 34 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ 5 ವರ್ಷದ ಮಗು ಶ್ರದ್ಧಾ ಕೂಡ ಸೇರಿದೆ. ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 11.30ರ ಸುಮಾರಿಗೆ ಮದುವೆಯ ವಿಧಿವಿಧಾನಗಳು ಮುಗಿದು ಅತಿಥಿಗಳು ಊಟಕ್ಕೆ ಕುಳಿತಿದ್ದಾಗ ಈ ಘಟನೆ ನಡೆದಿದೆ.
'ಇದ್ದಕ್ಕಿದ್ದಂತೆ ಗೋಡೆ ಮತ್ತು ಬಾಲ್ಕನಿ ಕುಸಿದು ಬಿದ್ದಿದ್ದು, ಕೆಲವೇ ನಿಮಿಷಗಳಲ್ಲಿ ಎಲ್ಲವೂ ಮುಗಿದು ಹೋಯಿತು' ಎಂದು ಪ್ರತ್ಯಕ್ಷದರ್ಶಿ ಅನಿಕೇತ್ ಸಿಂಗ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.