ಶುಕ್ರವಾರ, ಆಗಸ್ಟ್ 12, 2022
22 °C

ಈಶಾನ್ಯ ರಾಜ್ಯಗಳಲ್ಲಿ ಭೂಕಂಪನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ: ಈಶಾನ್ಯ ರಾಜ್ಯಗಳಾದ ಮೇಘಾಲಯ, ಅಸ್ಸಾಂ ಮತ್ತು ಮಣಿಪುರದಲ್ಲಿ ಶುಕ್ರವಾರ ಮುಂಜಾನೆ ಲಘು ಭೂಕಂಪನ ಸಂಭವಿಸಿದ ವರದಿಯಾಗಿದೆ.

ಅಸ್ಸಾಮಿನ ಸೋನಿಪತ್‌ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ 2.04ರ ವೇಳೆಗೆ 4.1ರಷ್ಟು ತೀವ್ರತೆಯ, ಮಣಿಪುರ ಚಂಡೇಲ್ ಜಿಲ್ಲೆಯಲ್ಲಿ ಮುಂಜಾನೆ 1.06ರ ವೇಳೆಗೆ 3.0 ತೀವ್ರತೆಯ ಹಾಗೂ ಮೇಘಾಲಯದ ಪಶ್ಚಿಮ ಖಾಸಿ ಪರ್ವತ ಪ್ರದೇಶದಲ್ಲಿ ಮುಂಜಾನೆ 4.20ರ ವೇಳೆಯಲ್ಲಿ 2.6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರವು (ಎನ್‌ಸಿಎಸ್‌) ತಿಳಿಸಿದೆ.

ಭೂಕಂಪನದಲ್ಲಿ ಯಾವುದೇ ಜೀವಹಾನಿಯಾದ ವರದಿಯಾಗಿಲ್ಲ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು