ಮಂಗಳವಾರ, ಜೂನ್ 28, 2022
21 °C

ಬಾರಾಮುಲ್ಲಾ ಎನ್‌ಕೌಂಟರ್: ಜೆಇಎಂನ 3 ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ. 

ಉತ್ತರ ಕಾಶ್ಮೀರದ ಕ್ರೀರಿ ಪ್ರದೇಶದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಉಗ್ರರ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. 

ಎನ್‌ಕೌಂಟರ್‌ನಲ್ಲಿ ಹತರಾದ ಭಯೋತ್ಪಾದಕರು ಶ್ರೀನಗರಕ್ಕೆ ಬಂದು ಭಯೋತ್ಪಾದನಾ ಕೃತ್ಯವೆಸಗುತ್ತಿದ್ದರು. ಹೀಗಾಗಿ ಈ ಮೂವರ ಹತ್ಯೆಯು ಬಹುದೊಡ್ಡ ಯಶಸ್ವಿ ಕಾರ್ಯಾಚರಣೆಯಾಗಿದೆ. ಗುಲ್ಮಾರ್ಗ್ ಗುಡ್ಡಗಾಡು ಪ್ರದೇಶದಲ್ಲಿ ಕಳೆದ 3-4 ತಿಂಗಳಿಂದ ಉಗ್ರರು ಚಟುವಟಿಕೆಗಳು ಸಕ್ರಿಯವಾಗಿವೆ. ಅಲ್ಲದೆ, ಉಗ್ರರನ್ನು ಸದೆಬಡೆಯುವ ಯತ್ನಗಳು ಮುಂದುವರಿದಿದೆ ಎಂದು ಅವರು ತಿಳಿಸಿದರು. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು