ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಡನ್‌ನಿಂದ ಆಗಮಿಸಿದ ಮೂವರು ಪ್ರಯಾಣಿಕರಿಗೆ ಕೋವಿಡ್: ಗೋವಾ ಸಚಿವ ವಿಶ್ವಜಿತ್

Last Updated 10 ಡಿಸೆಂಬರ್ 2021, 9:12 IST
ಅಕ್ಷರ ಗಾತ್ರ

ಪಣಜಿ: ಲಂಡನ್‌ನಿಂದ ಏರ್ ಇಂಡಿಯಾ ವಿಮಾನದಲ್ಲಿ ಗೋವಾಕ್ಕೆ ಆಗಮಿಸಿರುವ ಪ್ರಮಾಣಿಕರ ಪೈಕಿ ಮೂವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಶುಕ್ರವಾರ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಗೋವಾ ಸಚಿವರು, ಇಂದು ಬೆಳಿಗ್ಗೆ (ಶುಕ್ರವಾರ) ಯುಕೆಯಿಂದ ಎಐ-146 ವಿಮಾನ ಆಗಮಿಸಿದ ಬಳಿಕ 237 ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ಪೈಕಿ ಮೂವರು ಪ್ರಯಾಣಿಕರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಸರ್ಕಾರದ ಮಾರ್ಗಸೂಚಿ ಅನ್ವಯ ಕೋವಿಡ್ ಪಾಸಿಟಿವ್ ಪ್ರಯಾಣಿಕರನ್ನು ಕ್ವಾರಂಟೈ‌ನ್‌ಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಳಿದೆಲ್ಲ ಪ್ರಯಾಣಿಕರನ್ನು ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್‌ಗೆ ಸೂಚಿಸಲಾಗಿದೆ. ಎಂಟು ದಿನಗಳ ಬಳಿಕ ಅಥವಾ ಅದಕ್ಕಿಂತ ಮೊದಲು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡರೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದಿರುವ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವುದು ಕಳವಳಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT