ಕೋಲ್ಕತ್ತದಲ್ಲಿ ಮೂವರು ಶಂಕಿತ ಉಗ್ರರ ಬಂಧನ

ಕೋಲ್ಕತ್ತ (ಪಿಟಿಐ): ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಸಂಘಟನೆಯ ಸದಸ್ಯರಾಗಿರುವ ಮೂವರು ಶಂಕಿತ ಉಗ್ರರನ್ನು ಇಲ್ಲಿನ ಹರಿದೇವ್‌ಪುರ್ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೋಲ್ಕತ್ತ ಪೊಲೀಸ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಖಚಿತ ಸುಳಿವು ಆಧರಿಸಿ ದಾಳಿ ನಡೆಸಿ ಶಂಕಿತ ಉಗ್ರರನ್ನು ಬಂಧಿಸಿದರು. ಬಂಧಿತರು ಕೆಲ ತಿಂಗಳಿನಿಂದ ಬಾಡಿಗೆ ಮನೆಯೊಂದರರಲ್ಲಿ ವಾಸವಿದ್ದರು.
ಪ್ರಕರಣದ ತನಿಖೆಯು ಇನ್ನೂ ಅರಂಭಿಕ ಹಂತದಲ್ಲಿದ್ದು, ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.