ಮಂಗಳವಾರ, ಡಿಸೆಂಬರ್ 1, 2020
17 °C

ಜಾರ್ಖಂಡ್: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೆಮ್‌ಶೆಡ್‌ಪುರ(ಜಾರ್ಖಂಡ್): ಇಲ್ಲಿನ ಪೂರ್ವ ಸಿಂಗ್ಭೂಮ್ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ನ.4ರಂದು ಬಾಲಕಿಯ ಅತ್ಯಾಚರವೆಸಗಲಾಗಿದ್ದು, ಈ ಸಂಬಂಧ ಸಂತ್ರಸ್ತೆಯ ಪೋಷಕರು ಶನಿವಾರ ಸಂಜೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಲೋಕೊ ಕಾಲೊನಿಯಲ್ಲಿ ಬಾಲಕಿ ಆಟವಾಡುತ್ತಿದ್ದಾಗ ನೆರೆಮನೆಯವ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ  ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಆರೋಪಿ ಮತ್ತು ಆತನ ತಂದೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಾಲಕಿ ತಂದೆ ಊರಿನಲ್ಲಿ ಇರದಿದ್ದ ಕಾರಣ ಎಫ್‌ಐಆರ್‌ ದಾಖಲಿಸುವಾಗ ವಿಳಂಬವಾಗಿದೆ ಎಂದು  ಪೋಷಕರು ಹೇಳಿದರು ಎಂದು ಅವರು ಹೇಳಿದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು