ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ನಿಫಾ ವೈರಾಣು: 30 ಮಂದಿಯ ಪರೀಕ್ಷಾ ವರದಿ ನೆಗೆಟಿವ್‌ –ವೀಣಾ ಜಾರ್ಜ್‌

Last Updated 8 ಸೆಪ್ಟೆಂಬರ್ 2021, 5:59 IST
ಅಕ್ಷರ ಗಾತ್ರ

ಕೋಯಿಕ್ಕೋಡ್‌: ‘ನಿಫಾ ವೈರಾಣು ಸೋಂಕಿನಿಂದ ಮೃತಪಟ್ಟ 12 ವರ್ಷದ ಬಾಲಕನ ನಿಕಟ ಸಂಪರ್ಕಕ್ಕೆ ಬಂದ 30 ಮಂದಿಯ ಪರೀಕ್ಷಾ ವರದಿಯು ನೆಗೆಟಿವ್‌ ಬಂದಿದೆ’ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಅವರು ಹೇಳಿದರು.

‘ಬುಧವಾರ ಮುಂಜಾನೆ ಮತ್ತೆ 20 ಮಂದಿಯ ಪರೀಕ್ಷಾ ವರದಿ ಬಂದಿದ್ದು, ಫಲಿತಾಂಶ ನೆಗೆಟಿವ್‌ ಬಂದಿದೆ. ಹಾಗಾಗಿ ಈವರೆಗೆ ಬಾಲಕನ ನಿಕಟ ಸಂಪರ್ಕಕ್ಕೆ ಬಂದ 30 ಮಂದಿಯಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದೆ’ ಎಂದು ಅವರು ತಿಳಿಸಿದರು.

‘ಮಂಗಳವಾರ 10 ಮಂದಿಯ ಪರೀಕ್ಷಾ ಫಲಿತಾಂಶವು ನೆಗೆಟಿವ್‌ ಬಂದಿತ್ತು. ಸದ್ಯ 21 ಮಂದಿಯ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇದರ ವರದಿಯು ಇನ್ನಷ್ಟೇ ಬರಬೇಕಾಗಿದೆ. ಪ್ರಸ್ತುತ 68 ಮಂದಿಯ ಮೇಲೆ ನಿಗಾವಹಿಸಲಾಗಿದ್ದು, ಸದ್ಯ ಅವರ ಆರೋಗ್ಯ ಪರಿಸ್ಥಿತಿಯು ಸ್ಥಿರವಾಗಿದೆ’ ಎಂದು ಅವರು ಹೇಳಿದರು.

‘‌ಭೋಪಾಲ್‌ನ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ವೈರಾಲಜಿಯ ತಂಡವು ಇಲ್ಲಿಗೆ ಆಗಮಿಸಲಿದ್ದು, ನಿಫಾ ಸೋಂಕಿನ ಮೂಲ ಪತ್ತೆ ಹಚ್ಚುವ ನಿಟ್ಟಿನಲ್ಲಿ ಅವರು ಬಾವಲಿ ಸೇರಿದಂತೆ ಇತರೆ ಪ್ರಾಣಿಗಳ ಮಾದರಿಯನ್ನು ಸಂಗ್ರಹಿಸಲಿದ್ದಾರೆ. ನಿಫಾ ಪ್ರಸರಣವನ್ನು ತಡೆಯಲು ಸೋಂಕಿತರ ಸಂಪರ್ಕ ಪತ್ತೆ, ಕಟ್ಟೆಚ್ಚರ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT