ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: 2019ರಲ್ಲಿ ಅತ್ಯಾಚಾರಕ್ಕೊಳಗಾದವರಲ್ಲಿ ಶೇ 31ರಷ್ಟು ಮಕ್ಕಳು

Last Updated 6 ನವೆಂಬರ್ 2020, 5:31 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವರ್ಷ ದೆಹಲಿಯಲ್ಲಿ ದಾಖಲಾಗಿರುವ 3,137 ಅತ್ಯಾಚಾರ ಪ್ರಕರಣಗಳಲ್ಲಿ ಶೇ 31ರಷ್ಟು ಮಕ್ಕಳ ಮೇಲೆ ನಡೆದಿವೆ ಎಂದು ಸ್ವಯಂ ಸೇವಾ ಸಂಸ್ಥೆಯೊಂದು ತಿಳಿಸಿದೆ.

‘ಐದು ವರ್ಷಗಳಲ್ಲಿ ಪ್ರಮುಖ ಅಪರಾಧ ಪ್ರಕರಣಗಳು ವರದಿಯಾಗುತ್ತಿರುವುದು ಕಡಿಮೆಯಾಗಿದೆ. ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿರುವ ಪ್ರಮಾಣದಲ್ಲಿ ಶೇ 1ರಷ್ಟು ಹಾಗೂ ಕೊಲೆ ಪ್ರಕರಣಗಳು ಶೇ 9ರಷ್ಟು ಕಡಿಮೆಯಾಗಿವೆ’ ಎಂದು ಪ್ರಜಾ ಫೌಂಡೇಷನ್ ತಿಳಿಸಿದೆ.

ಕಳೆದ ವರ್ಷ ದೆಹಲಿಯಲ್ಲಿ ನಡೆದಿರುವ 3,137 ಅತ್ಯಾಚಾರ ಪ್ರಕರಣಗಳಲ್ಲಿ, 969 ಮಕ್ಕಳ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯವಾಗಿದ್ದು, ಈ ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಅತ್ಯಾಚಾರಕ್ಕೊಳಗಾದ ಮಕ್ಕಳಲ್ಲಿ 425 ಮಂದಿ 16ರಿಂದ 18 ವರ್ಷದೊಳಗಿನವರು.

ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ಶೇ 96ರಷ್ಟು ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರಿಗೆ, ಅಪರಾಧಿ ಯಾರು ಎಂಬುದು ಗೊತ್ತಿರುತ್ತದೆ ಎಂದು ಸಂಸ್ಥೆ ತಿಳಿಸಿದೆ. ಈ ಹೇಳಿಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

2019ರಲ್ಲಿ 2.37 ಲಕ್ಷ ಕಳ್ಳತನದ ಪ್ರಕರಣಗಳು ದಾಖಲಾಗಿವೆ. 2015ಕ್ಕೆ ಹೋಲಿಸಿದರೆ ಇದು ಶೇ 166ರಷ್ಟು ಏರಿಕೆಯಾಗಿದೆ ಎಂದು ಸಂಸ್ಥೆ ಅಂಕಿ ಅಂಶಗಳಿಂದ ಕೂಡಿದ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT