ಸೋಮವಾರ, ಅಕ್ಟೋಬರ್ 26, 2020
21 °C

ಆರು ತಿಂಗಳಲ್ಲಿ 32,876 ದೂರು ದಾಖಲು: ಎನ್‌ಎಚ್‌ಆರ್‌ಸಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗಿನ ಆರು ತಿಂಗಳ ಅವಧಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು(ಎನ್‌ಎಚ್‌ಆರ್‌ಸಿ) 32,876 ದೂರುಗಳನ್ನು ದಾಖಲಿಸಿದೆ ಎಂದು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಚ್‌.ಎಲ್‌.ದತ್ತು ಸೋಮವಾರ ತಿಳಿಸಿದರು. 

‘ಕೋವಿಡ್‌–19 ಕಾರಣದಿಂದಾಗಿ ಈ ವರ್ಷ ಮಾನವ ಸಂಕುಲವೇ ಸಂಕಷ್ಟದಲ್ಲಿದೆ. 2019 ಅ.1ರಿಂದ ಈ ವರ್ಷದ ಸೆ.30ರವರೆಗೆ ಒಟ್ಟು 73,729 ದೂರುಗಳು ದಾಖಲಾಗಿವೆ. ಇವುಗಳಲ್ಲಿ 32,876 ದೂರುಗಳು ಏಪ್ರಿಲ್‌1ರಿಂದ ಸೆ.30ರ ನಡುವೆ ದಾಖಲಾಗಿವೆ. ಇವುಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣದಲ್ಲಿ 29 ಸ್ವಯಂಪ್ರೇರಿತ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ಆಯೋಗದ 27ನೇ ಸಂಸ್ಥಾಪನಾ ದಿನದ ಅಂಗವಾಗಿ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ದತ್ತು ಅವರು ಉಲ್ಲೇಖಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು