ಬುಧವಾರ, ಡಿಸೆಂಬರ್ 2, 2020
26 °C

ಕೇಂದ್ರ ಆಡಳಿತ ಸೇವೆಯ ತರಬೇತಿ ನಿರತ 33 ‌ಅಧಿಕಾರಿಗಳಿಗೆ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಸ್ಸೂರಿಯಲ್ಲಿ ಇರುವ ನಾಗರಿಕ ಸೇವಾ ತರಬೇತಿ ಕೇಂದ್ರ 'ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಅಕಾಡೆಮಿ'ಯಲ್ಲಿ ತರಬೇತಿಯಲ್ಲಿದ್ದ 33 ಅಧಿಕಾರಿಗಳಿಗೆ ಕೋವಿಡ್‌ ದೃಢಪಟ್ಟಿದೆ.

ಕೇಂದ್ರದ ಅಧಿಕಾರಿಗಳು ಈ ಕುರಿತು ಟ್ವೀಟ್ ಮಾಡಿದ್ದಾರೆ. ‘33 ಅಧಿಕಾರಿಗಳಿಗೆ ಸೋಂಕು ದೃಢಪಟ್ಟಿದೆ. ಒಟ್ಟು 428 ಅಧಿಕಾರಿಗಳು ತರಬೇತಿ ಪಡೆಯುತ್ತಿದ್ದರು. ಸೋಂಕು ತಡೆಗೆ ಅಗತ್ಯ ಕ್ರಮವಹಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಆಹಾರ ಮತ್ತು ಇತರೆ ಅಗತ್ಯ ವಸ್ತುಗಳನ್ನು ಅಧಿಕಾರಿಗಳಿಗೆ ಅವರ ಹಾಸ್ಟೆಲ್‌ಗಳಿಗೆ ಒದಗಿಸುತ್ತಿರುವ ಸಿಬ್ಬಂದಿಯೂ ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.

ಎಲ್ಲ ತರಗತಿಗಳು ನ. 30ರವರೆಗೂ ಆನ್‌ಲೈನ್‌ನಲ್ಲಿ ನಡೆಯಲಿದೆ. ಅಗತ್ಯವಲ್ಲದ ವಿಭಾಗಗಳನ್ನು ಮುಚ್ಚಲಾಗಿದೆ. ಕ್ಯಾಂಪಸ್‌ನಲ್ಲಿ ಸ್ಯಾನಿಟೈಸ್ ಮಾಡಲು ಕ್ರವಹಿಸಲಾಗಿದೆ ಎಂದು ಕೇಂದ್ರದ ನಿರ್ದೇಶಕ ಸಂಜೀವ್‌ ಚೋಪ್ರಾ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು