‘ಇಲ್ಲಿ ನಾವು ಸುರಕ್ಷಿತವಲ್ಲ’: ಕಾಶ್ಮೀರಿ ಪಂಡಿತ ನೌಕರ ವರ್ಗ ಸಾಮೂಹಿಕ ರಾಜೀನಾಮೆ

ಕಾಶ್ಮೀರ: ‘ಪ್ರಧಾನ ಮಂತ್ರಿಗಳ ಉದ್ಯೋಗ ಪ್ಯಾಕೇಜ್’ ಅಡಿಯಲ್ಲಿ ಕಾಶ್ಮೀರದ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 350 ಕಾಶ್ಮೀರಿ ಪಂಡಿತರ ವರ್ಗ ತಮ್ಮ ಹುದ್ದೆಗಳಿಗೆ ಶುಕ್ರವಾರ ಸಾಮೂಹಿಕ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮಿರದ ಲೆಫ್ಟಿನೆಂಟ್ ಗವರ್ನರ್ (ಎಲ್ಜೆ) ಮನೋಜ್ ಸಿನ್ಹಾ ಅವರಿಗೆ ರಾಜೀನಾಮೆ ಪತ್ರ ರವಾನಿಸಲಾಗಿದೆ.
‘ಪ್ರಧಾನ ಮಂತ್ರಿ ಉದ್ಯೋಗ ಪ್ಯಾಕೇಜ್’ ಅಡಿ ಕಳೆದ 12 ವರ್ಷಗಳಿಂದ ಕಣಿವೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಕಾಶ್ಮೀರಿ ಪಂಡಿತ ಅಲ್ಪಸಂಖ್ಯಾತರಿಗೆ ಭದ್ರತಾ ಭಾವ ಒದಗಿಸುವಲ್ಲಿ ಆಡಳಿತ ವಿಫಲವಾಗಿದೆ. ‘ಕಾಶ್ಮೀರದಲ್ಲಿ ನಾವು ಸುರಕ್ಷಿತವಾಗಿಲ್ಲ’ ಎಂದು ನೌಕರ ವರ್ಗ ಪತ್ರದಲ್ಲಿ ಉಲ್ಲೇಖಿಸಿದೆ.
‘ನೌಕರೆಲ್ಲರೂ ಸಾಮೂಹಿಕ ರಾಜೀನಾಮೆ ನೀಡುವುದನ್ನು ಹೊರತುಪಡಿಸಿ, ನಮಗೆ ಯಾವುದೇ ಆಯ್ಕೆಯಿಲ್ಲ. ಇದು ನಮ್ಮ ಜೀವಗಳನ್ನು ಉಳಿಸಿಕೊಳ್ಳಲು ಇರುವ ಏಕೈಕ ಮಾರ್ಗೋಪಾಯ’ ಎಂದು ಪತ್ರದಲ್ಲಿ ಹೇಳಲಾಗಿದೆ.
ಕಾಶ್ಮೀರಿ ಪಂಡಿತರಾದ ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಬುದ್ಗಾವ್ನ ತಹಸೀಲ್ ಕಚೇರಿಯಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದ ಘಟನೆಗೆ ಪ್ರತಿಭಟನಾರ್ಥವಾಗಿ ಈ ಬೆಳವಣಿಗೆ ನಡೆದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.