ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣಾಚಲ ಪ್ರದೇಶದಲ್ಲಿ 3.8 ತೀವ್ರತೆಯ ಭೂಕಂಪ

Last Updated 19 ಫೆಬ್ರುವರಿ 2023, 12:49 IST
ಅಕ್ಷರ ಗಾತ್ರ

ಗುವಾಹಟಿ: ಅರುಣಾಚಲ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾನುವಾರ 3.8 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂತಾನ್ ಗಡಿಯ ಸಮೀಪವಿರುವ ಪಶ್ಚಿಮ ಕಮೆಂಗ್‌ನಲ್ಲಿ ಮಧ್ಯಾಹ್ನ 12.12 ಕ್ಕೆ ಭೂಕಂಪ ಸಂಭವಿಸಿದ್ದು, ಭೂಮಿಯಿಂದ 10 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.

ಅಸ್ಸಾಂನ ಮಧ್ಯಭಾಗ, ಉತ್ತರದಲ್ಲಿ ಮತ್ತು ಭೂತಾನ್‌ನ ಪೂರ್ವ ಭಾಗದಲ್ಲಿ ಕಂಪನದ ಅನುಭವವಾಗಿದೆ. ಘಟನೆಯಿಂದ ಪ್ರಾಣಹಾನಿ ಹಾಗೂ ಆಸ್ತಿ–ಪಾಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT