ಮಂಗಳವಾರ, ನವೆಂಬರ್ 24, 2020
19 °C
ಬ್ಯಾಂಕಿನಿಂದ ₹20 ಕೋಟಿ ಸಾಲ ಪಡೆದ ಕುಟುಂಬ

ಒಂದೇ ಆಸ್ತಿ ನಾಲ್ಕು ಬಾರಿ ಅಡವಿಟ್ಟು ಸಾಲ: ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಒಂದೇ ಆಸ್ತಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ, ವಿವಿಧ ಬ್ಯಾಂಕುಗಳಿಂದ ₹ 20 ಕೋಟಿ ಸಾಲ ಪಡೆದು ವಂಚಿಸಿದ್ದ ಒಂದೇ ಕುಟುಂಬದ ನಾಲ್ವರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಇಂತಹದ್ದೇ ಪ್ರಕರಣವೊಂದರಲ್ಲಿ ದೆಹಲಿ ಮೆಟ್ರೊ ರೈಲು ನಿಗಮವು ಈಗಾಗಲೇ ಸ್ವಾಧೀನಪಡಿಸಿಕೊಂಡ ಆಸ್ತಿಯ ಮೇಲೆ ಆರೋಪಿಗಳು ಸಾಲ ಪಡೆದುಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅಶ್ವಿನಿ ಆರೋರ, ವಿಜಯ್ ಅರೋರ ಮತ್ತು ಅವರ ಪತ್ನಿಯರನ್ನು ಪೊಲೀಸರು ದೆಹಲಿ ಮತ್ತು ಗಾಜಿಯಾಬಾದ್‌ನಲ್ಲಿ ಬಂಧಿಸಿದ್ದಾರೆ. ಈ ನಾಲ್ವರೂ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದರು. ವಿವಿಧ ಬ್ಯಾಂಕುಗಳಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ 2016ರಲ್ಲಿ ದೂರು ದಾಖಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು