ಗುರುವಾರ , ಸೆಪ್ಟೆಂಬರ್ 23, 2021
26 °C

ನವೆಂಬರ್‌ ವೇಳೆಗೆ ಇನ್ನೂ ನಾಲ್ಕು ಕಂಪನಿಗಳಿಂದ ಲಸಿಕೆ ಉತ್ಪಾದನೆ: ಮಾಂಡವೀಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಕ್ಟೋಬರ್–ನವೆಂಬರ್ ವೇಳೆಗೆ ಇನ್ನೂ ನಾಲ್ಕು ಔಷಧ ಕಂಪನಿಗಳು ಕೋವಿಡ್ ವಿರುದ್ಧದ ಲಸಿಕೆ ಉತ್ಪಾದನೆ ಆರಂಭಿಸಲಿವೆ. ಲಸಿಕಾ ಅಭಿಯಾನಕ್ಕೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್‌ ಮಾಂಡವೀಯ ಸಂಸತ್‌ನಲ್ಲಿ ತಿಳಿಸಿದ್ದಾರೆ.

ಈವರೆಗೆ ದೇಶದಲ್ಲಿ 47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಆದಷ್ಟು ಬೇಗನೆ ದೇಶದ ಎಲ್ಲ ಜನರಿಗೂ ಲಸಿಕೆ ನೀಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನೂ ಸರ್ಕಾರ ಮಾಡುತ್ತಿದೆ ಎಂದು ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಸಚಿವರು ಹೇಳಿದ್ದಾರೆ.

ಓದಿ: 

ಖಾಸಗಿ ಆಸ್ಪತ್ರೆಗಲ್ಲಿ ಬಳಕೆಯಾಗದೇ ಉಳಿದಿರುವ ಶೇ 7ರಿಂದ 9ರಷ್ಟು ಡೋಸ್‌ಗಳನ್ನೂ ಸರ್ಕಾರಿ ಲಸಿಕಾ ಕೇಂದ್ರಗಳ ಮೂಲಕ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

‘ಲಸಿಕಾ ಅಭಿಯಾನ ಸುಗಮವಾಗಿ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಮತ್ತಷ್ಟು ವೇಗ ದೊರೆಯಲಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು